ಲಾರಿಯೊಂದರಲ್ಲಿ ಸಾಗಿಸುತ್ತಿದ್ದ ಜಾನುವಾರುಗಳು ವಶ

Source: S.O. News Service | By MV Bhatkal | Published on 7th July 2019, 7:03 PM | Coastal News | Don't Miss |

ಯಲ್ಲಾಪುರ: ಲಾರಿಯೊಂದರಲ್ಲಿ ಅಕ್ರಮವಾಗಿ, ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದ ಒಂಬತ್ತು ಎಮ್ಮೆಗಳನ್ನು ಪಟ್ಟಣದ ಜೋಡುಕೆರೆ ಬಳಿ ಪೊಲೀಸರು ವಶಪಡಿಸಿಕೊಂಡು, ಮೂವರನ್ನು ಬಂಧಿಸಿದ್ದಾರೆ.
ಗುಜರಾತ್ ಸಿದಪುರ ಪಠಾಣ್‍ದ ಮುಸ್ತಾಕ್ ಅಬ್ಬಾಸ್ ಸುಣಸರಾ, ಜಿತೇಂದ್ರ ರಾಮಜೀ ಬಾಯ್ ರಾವಲ್, ನಹೇಶ ಗಜೂಜಿ ಠಾಕೂರ ಬಂಧಿತರು. ಇವರು ಯಾವುದೇ ಪರವಾನಗಿ ಇಲ್ಲದೇ ಲಾರಿಯಲ್ಲಿ ಗುಜರಾತ್ ಬೂಜ್‍ನಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದರು ಎನ್ನಲಾಗಿದೆ. ಜಾನುವಾರುಗಳ ಮೌಲ್ಯ ₹3.60 ಲಕ್ಷ ಎಂದು ಅಂದಾಜಿಸಲಾಗಿದೆ.
ಪಟ್ಟಣದ ಜೋಡುಕೆರೆ ಬಳಿ ಪೊಲೀಸರು ದಾಳಿ ನಡೆಸಿ, ₹3.60 ಲಕ್ಷ ಮೌಲ್ಯದ 9 ಜಾನುವಾರುಗಳನ್ನು ವಶಪಡಿಸಿಕೊಂಡು ಮೂವರನ್ನು ಬಂಧಿಸಿದ್ದಾರೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...