ಯರಗುಪ್ಪಿ ಗ್ರಾಮ ಪಂಚಾಯತ ಪಿಡಿಓ ಅಮಾನತ್ತು. ಪಾರದರ್ಶಕ ತನಿಖೆಗೆ ಜಿಲ್ಲಾ ಪಂಚಾಯತ ಸಿಇಓ ಆದೇಶ

Source: SO News | By Laxmi Tanaya | Published on 14th January 2022, 9:56 PM | State News | Don't Miss |

ಧಾರವಾಡ :  ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮ ಪಂಚಾಯತಿಯ ಪಂಚಾಯತ ಅಭಿವೃದ್ಧಿ ಅಧಿಕಾರಿಯು ಕರ್ತವ್ಯಲೋಪ ಮಾಡಿ, ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ, ಜನೆವರಿ 10, 2022 ರಂದು ಪಿಡಿಓ ನವಾಬ್‍ಸಾಬ್ ಅಲಿಸಾಬ್ ನದಾಫ್ ಅವರನ್ನು ಅಮಾನತ್ತುಗೊಳ್ಳಿಸಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಆದೇಶ ಹೊರಡಿಸಿದ್ದಾರೆ.

 ಈ ಕುರಿತು ಪ್ರಕಟಣೆ ನೀಡಿರುವ ಅವರು, ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮ ಪಂಚಾಯತಿಯ ಪಂಚಾಯತ ಅಭಿವೃದ್ಧಿ ಅಧಿಕಾರಿಯು ಕರ್ತವ್ಯಲೋಪ ಮಾಡಿರುವ ಕುರಿತು ತನಿಖೆ ಕೈಗೊಂಡು ವರದಿ ಸಲ್ಲಿಸಲು ಕುಂದಗೋಳ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶಿಸಲಾಗಿತ್ತು. ಅದರಂತೆ ಅವರು ಅಧಿಕಾರಿಗಳ ತಂಡ ರಚಿಸಿ, ಯರಗುಪ್ಪಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ವರದಿ ನೀಡಲು ಕ್ರಮ ಕೈಗೊಂಡಿದ್ದರು. ತನಿಖಾ ತಂಡದ ವರದಿ ಆದರಿಸಿ ಯರಗುಪ್ಪಿ ಗ್ರಾಮ ಪಂಚಾಯತಿ ಪಿಡಿಓ ಸರಿಯಾಗಿ ಕರ್ತವ್ಯ ನಿರ್ವಹಿಸದ, ಅನಧಿಕೃತ ಗೈರು ಹಾಜರು ಯೋಜನಾ ಅನುಷ್ಠಾನದಲ್ಲಿ ವಿಳಂಬ ಹಾಗೂ ಉನ್ನತ ಅಧಿಕಾರಿಗಳ ನಿರ್ದೇಶನಗಳನ್ನು ಪಾಲಿಸದಿರುವ ಕುರಿತು ವರದಿ ಸಲ್ಲಿಸಿ, ಸದರಿ ಪಿಡಿಓ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಶಿಪಾರಸ್ಸು ಮಾಡಿದ್ದರು.
  ಅದರಂತೆ ತನಿಖೆ ಕೈಗೊಂಡು ಜನೆವರಿ 10, 2022 ರಂದು ಇಲಾಖಾ ವಿಚರಣೆ ಕಾಯ್ದಿರಿಸಿ, ಯರಗುಪ್ಪಿ ಗ್ರಾಮ ಪಂಚಾಯತಿಯ ಪಿಡಿಓ ನವಾಬ್‍ಸಾಬ್ ಅಲಿಸಾಬ್ ನದಾಫ್ ಅವರನ್ನು ಅಮಾನತ್ತುಗೊಳಿಸಿ ಆದೇಶಿಸಲಾಗಿದೆ. ಮತ್ತು ಅಮಾನತ್ತುಗೊಂಡ ಸದರಿ ನೌಕರನು ಮೇಲಾಧಿಕಾರಿಗಳ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ ಎಂದು ನಿರ್ದೇಶಿಸಲಾಗಿದೆ.

 ಬೂತರ್ಲಘಟ್ಟ ಗ್ರಾಮ ಪಂಚಾಯತಿಯ ಪಿಡಿಓ ಪುಷ್ಪಾವತಿ ಮೇದಾರ ಅವರನ್ನು ಯರಗುಪ್ಪಿ ಗ್ರಾಮ ಪಂಚಾಯತಿ ಪಿಡಿಓ ಹುದ್ದೆಯ ಹೆಚ್ಚುವರಿ ಚಾರ್ಜ್ ನೀಡಿ ನೇಮಿಸಲಾಗಿದೆ.
 ಗ್ರಾಮ ಪಂಚಾಯತ ಪಿಡಿಓ ವಿರುದ್ಧ ಕೇಳಿ ಬಂದಿರುವ ದೂರುಗಳ ಕುರಿತು ಪಾರದರ್ಶಕವಾಗಿ ಸಮಗ್ರ ತನಿಖೆ ಕೈಗೊಂಡು, ಆದಷ್ಟು ಬೇಗನೆ ವರದಿ ನೀಡುವಂತೆ ನಿರ್ದೇಶಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಭಟ್ಕಳ: ಬಿಜೆಪಿಯಿಂದ ಎನ್‌ಇಪಿ ಮೂಲಕ ನಾಗ್ಪುರ್ ಗುಪ್ತ ಕಾರ್ಯಸೂಚಿ: ಬಿ.ಕೆ.ಹರಿಪ್ರಸಾದ್

ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜ್ಯವನ್ನೂ ಅದರಲ್ಲೂ ಕರಾವಳಿಯನ್ನು ಕೇಸರೀಕರಣ ಮಾಡುವ ಪ್ರಯತ್ನಕ್ಕೆ ಕೈ ಹಾಕಿದ್ದು, ...

ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ; ಗ್ರಾಮೀಣ ವಿದ್ಯಾರ್ಥಿಗಳದೇ ಮೇಲುಗೈ; 145 ವಿದ್ಯಾರ್ಥಿಗಳಿಗೆ 625 ಅಂಕ

ಮಾರ್ಚ್ ತಿಂಗಳಿನಲ್ಲಿ ನಡೆದ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದ ಒಟ್ಟು 8,53,436 ವಿದ್ಯಾರ್ಥಿಗಳ ಪೈಕಿ 7,30,881 ...

ಶಾಲಾ ಪಠ್ಯ ಪುಸ್ತಕಗಳು ಆರೆಸಸ್ ಮಯ; ಕೇಜ್ರಿವಾಲ್, ಭಗವಂತ್ ಮಾನ್ ಸಹಿತ ಹಲವು ಮುಖಂಡರಿಂದ ಆಕ್ರೋಶ

ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ರಂತಹ ರಾಷ್ಟ್ರ ಪ್ರೇಮಿಗಳ ಅಧ್ಯಾಯಗಳನ್ನು ಕಿತ್ತು ಹಾಕಿ, ಸ್ವಾತಂತ್ರ್ಯ ಹೋರಾಟದಲ್ಲಿ ಯಾವ ಪಾತ್ರವೂ ...

ಪೊನ್ನಂಪೇಟೆಯಲ್ಲಿ ಸಂಘಪರಿವಾರದಿಂದ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ; ಸರಕಾರ ಜೀವಂತವಿದೆಯೇ? ಸಿದ್ದರಾಮಯ್ಯ ಆಕ್ರೋಶ

ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಶಾಲೆಯ ಆವರಣದಲ್ಲಿ ಬಜರಂಗದಳ ನಡೆಸಿದ ಬಂದೂಕು ತರಬೇತಿಯಂತಹ ಕಾನೂನು ವಿರೋಧಿ ಚಟುವಟಿಕೆಗಳಿಗೆ ಅವಕಾಶ ...