ಕಾರವಾರ: ಆಝಾದ್ ಯುಥ್ ಕ್ಲಬ್ ಕಾರವಾರದವರಿಂದ ಯೋಗ

Source: Press release | By S O News | Published on 12th June 2021, 12:00 PM | Coastal News |

ಕಾರವಾರ: ಯುವ ಸಬಲೀಕರಣಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ(ನಿಮ್ಹಾನ್ಸ್), ಪರಿವರ್ತನಾ ಯೋಗ ಫೌಂಡೇಶನ್ ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಗಳ ಸಹಯೋಗದಲ್ಲಿ 7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ದಿನಾಂಕ 11.06.2021 ರಿಂದ 21.06.2021ರವರೆಗೆ ಆನ್‍ಲೈನ್‍ನಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮಕ್ಕೆ ಆಝಾದ್ ಯುಥ್ ಕ್ಲಬ್ ಕಾರವಾರದವರು ಸಾಮಾಜಿಕ ಅಂತರ ಕಾಯ್ದುಕೊಂಡು ಯೋಗ ಮಾಡುವುದರ ಮೂಲಕ ಕ್ಲಬ್‍ನ ಸಹಯೋಗದೊಂದಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕ್ಲಬ್‍ನ ಸಂಸ್ಥಾಪಕರು ಮತ್ತು ರಾಷ್ಟ್ರ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತ ನಜೀರ್ ಅಹಮದ್ ಯು. ಶೇಖ್, ಅಧ್ಯಕ್ಷ ಮೊಹಮ್ಮದ್ ಅಸಿಫ್ ಶೇಖ್, ಕಾರ್ಯದರ್ಶಿ ಮೊಹಮ್ಮದ್ ಉಸ್ಮಾನ್ ಶೇಖ್, ಮಾಜಿ ಅಧ್ಯಕ್ಷ ರಾಷ್ಟ್ರ ಯುವ ಪ್ರಶಸ್ತಿ ವಿಜೇತ ಮೊಹಮ್ಮದ್ ಹಸನ್, ಅಮೀನುದ್ದೀನ್ ಶೇಖ್, ಸುವೇಲ್ ಶೇಖ್, ಅಬ್ದುಲ್ ಅಜೀಜ್ ಶೇಖ್, ಮೊಹಿದ್ದೀನ್ ಶೇಖ್, ಆಯಿಶಾಬಿ ಶೇಖ್ ಮತ್ತು ಕ.ಸಾ.ಪ.ಸದಸ್ಯೆ ಫೈರೋಜಾ ಬೇಗಂ ಶೇಖ್ ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...