ಆರೋಗ್ಯದ ಬಲವರ್ಧನೆಗೆ ಯೋಗ ಅತೀ ಅವಶ್ಯಕವಾಗಿ ಬೇಕು-ಇಬ್ರಾಹಿಂ ಕಲ್ಲೂರ್

Source: so news | By MV Bhatkal | Published on 22nd June 2019, 1:18 PM | Coastal News | Don't Miss |

ಕಾರವಾರ: ಇತ್ತೀಚಿನ ದಿನಗಳಲ್ಲಿ ಜನರು ಅನೇಕ ಬೇರೆ ಬೇರೆ ವಿಧದ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಹೆಚ್ಚು ಹೆಚ್ಚು ಔಷಧಿಗಳ ಬಳಕೆಯಿಂದ ಕೆಲವೊಮ್ಮೆ ಅಡ್ಡ ಪರಿಣಾಮಗಳಾಗುವ ಸಾಧ್ಯತೆಗಳೂ ಇರುತ್ತವೆ. ಆದ್ದರಿಂದ ನಿಯಮಿತವಾಗಿ ಯೋಗಮಾಡುವ ಅಭ್ಯಾಸವನ್ನು ಮಾಡಿಕೊಳ್ಳಬೇಕು. ಇದರಿಂದ ಮುಂದೆ ಬುರುವಂತಹ ಕಾಯಿಲೆಗಳನ್ನು ತಡೆಗಟ್ಟಬಹುದು. ಆದ್ದರಿಂದ ಆರೋಗ್ಯದ ಬಲವರ್ಧನೆಗೆ ಯೋಗ ಅತೀ ಅವಶ್ಯಕವಾಗಿ ಬೇಕು. ಇದನ್ನು ಚಿಕ್ಕಂದಿನಿಂದಲೇ ರೂಢಿಸಿಕೊಳ್ಳಬೇಕು. ಎಲ್ಲಾ ಔಷಧಿಗಳಿಗಿಂತಲೂ ಉತ್ತಮವಾದ ದಿವ್ಯ ಔಷಧಿ ಯೋಗವಾಗಿದೆ. ಎಷ್ಟೇ ಕೆಲಸದ ಒತ್ತಡ ವಿದ್ದರೂ ಯೋಗವನ್ನು ದಿನನಿತ್ಯ ಮಾಡಬೇಕು ಎಂದು ಆಝಾದ್ ಯುಥ್ ಕ್ಲಬ್‍ನ ಚೀಫ್ ಪ್ಯಾಟ್ರನ್ ಹಾಗೂ ಕಲ್ಲೂರ್ ಎಜ್ಯುಕೇಶನ್ ಟ್ರಸ್ಟ್‍ನ ಅಧ್ಯಕ್ಷರೂ ಆಗಿರುವ ಇಬ್ರಾಹಿಂ ಕ್ಲಲೂರ್ ತಿಳಿಸಿದರು. ಅವರು ಆಝಾದ್ ಯುಥ್ ಕ್ಲಬ್ ಕಾರವಾರ ಹಾಗೂ ಕಲ್ಲೂರ್ ಎಜ್ಯುಕೇಶನ್ ಟ್ರಸ್ಟ್ ಕಾರವಾರದವರು ಸಂಯುಕ್ತವಾಗಿ ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ಯ ನಿಮಿತ್ತ ಸದಾಶಿವಗಡದ ಸ.ಕಿ.ಪ್ರಾ.ಕ.ಶಾಲೆ ನಾಗಫೊಂಡ ನಂ-1 ರಲ್ಲಿ ಹಮ್ಮಿಕೊಂಡ ಮಕ್ಕಳಿಂದ ಯೋಗ ಮಾಡಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿದರು. ಜೊತೆಗೆ ಮಕ್ಕಳೂ ಸಹ ಬಾಲ್ಯದಿಂದಲೇ ವ್ಯಾಯಾಮ ಹಾಗೂ ಸರಳ ಯೋಗಗಳನ್ನು ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ರಾಷ್ಟ್ರ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ನಜೀರ್ ಅಹಮದ್ ಯು.ಶೇಖ್ ಮಾತನಾಡಿ ದಿನನಿತ್ಯ ಯೋಗ ಮಾಡುವುದರಿಂದ ಹಾಗೂ ಆಹಾರವನ್ನು ಮಿತವಾಗಿ ಸೇವಿಸುವುದರಿಂದ ನಮ್ಮ ದೇಹವನ್ನು ಉತ್ತಮ ಸ್ಥಿತಿಯಲ್ಲಿ ಇಟ್ಟುಕೊಳ್ಳಬಹುದು. ದೇಹವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವುದರಿಂದ ಮಧುಮೇಹ, ಅಧಿಕ ರಕ್ತದ ಒತ್ತಡ ಇತ್ಯಾದಿ ಕಾಯಿಲೆಗಳಿಂದ ದೂರ ಇರಬಹುದು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಮಕ್ಕಳು ಬೇರೆ ಬೇರೆ ವಿಧದ ಯೋಗಾಸನಗಳನ್ನು ಪ್ರದರ್ಶನ ಮಾಡಿದರು. ಪ್ರಾರಂಭದಲ್ಲಿ ಶಿಕ್ಷಕಿ ಫೈರೋಜಾ ಬೇಗಂ ಶೇಖ್ ಪ್ರಾಸ್ತವಿಕ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು. ಕೊನೆಯಲ್ಲಿ ಮುಖ್ಯಾಧ್ಯಾಪಕಿ ಕಲ್ಪನಾ ನಾಯ್ಕ ವಂದಿಸಿದರು. ಈ ಕಾರ್ಯಕ್ರಮವನ್ನು ಆಝಾದ್ ಯುಥ ಕ್ಲಬ್‍ನ ಕಾರ್ಯದರ್ಶಿ ಮೊಹಮ್ಮದ್ ಉಸ್ಮಾನ್ ಶೇಖ್ ಸಂಘಟಿಸಿದ್ದರು. ಈ ಸಂದರ್ಭದಲ್ಲಿ ಕ್ಲಬ್‍ನ ಸದಸ್ಯ ಮೊಹಮ್ಮದ್ ಅಸಿಫ್ ಶೇಖ್ ಉಪಸ್ಥಿತರಿದ್ದರು

Read These Next

ಜೆಡಿಎಸ್ ಮತ ಬುಟ್ಟಿಗೆ ’ಕೈ’ ಹಾಕಿದ ಅಂಜಲಿ ತಾಯಿ ; ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮ ಗೌಡರ ಮನೆಗೆ ಭೇಟಿ

ಅಂಕೋಲಾ: ಉ.ಕ ಲೋಕಸಭಾ ಕ್ಷೇತ್ರದ ಅಂಕೋಲಾ, ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಹಾಲಕ್ಕಿ ಒಕ್ಕಲಿಗ ಸಮುದಾಯದ ಮತಗಳು ಹೆಚ್ಚಿನ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...