ಕಾರವಾರ: ‘ಯುವ ವಿಜ್ಞಾನಿ ಪ್ರಶಸ್ತಿ’ಗೆ ಅರ್ಜಿ ಆಹ್ವಾನ

Source: S.O. News service | By S O News | Published on 26th January 2021, 12:54 AM | Coastal News | Don't Miss |

ಕಾರವಾರ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಮಕ್ಕಳಿಗೆ ವಿಜ್ಞಾನ ವಿಷಯಗಳಲ್ಲಿ ಆಸಕ್ತಿ ಹಾಗೂ ಚಿಂತನಾ ಕೌಶಲ್ಯ ವೃದ್ಧಿಸಬೇಕೆಂಬ ಉದ್ದೇಶದಿಂದ 9 ರಿಂದ 12ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ಆಸಕ್ತ ವಿದ್ಯಾರ್ಥಿಗಳಿಂದ ‘ಯುವ ವಿಜ್ಞಾನಿ ಪ್ರಶಸ್ತಿ’ಗೆ ಅರ್ಜಿ ಆಹ್ವಾನಿಸಿದೆ.

ಆಸಕ್ತ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೇಂದ್ರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಅಥವಾ ಕರವಿಪ ವೆಬ್‍ಸೈಟ್: www.krvp.org ಮೂಲಕ ಅರ್ಜಿ ಪಡೆಯಬಹುದು.

ಭರ್ತಿ ಮಾಡಿದ ಅರ್ಜಿಯನ್ನು ಜ. 31ರೊಳಗಾಗಿ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಹಾಗೂ ಅರ್ಜಿಯ ಒಂದು ಪ್ರತಿಯನ್ನು ಕರಾವಿಪ ಕೇಂದ್ರ ಕಚೇರಿಗೆ ತಲುಪುವಂತೆ ಸಲ್ಲಿಸಬೇಕು.

ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಸ್ಪರ್ಧೆಯ ದಿನದಂದು ವಿಜ್ಞಾನ ಅಥವಾ ಗಣಿತ ವಿಷಯದಲ್ಲಿ ಸ್ವಂತ ಅಧ್ಯಯನ ಕೈಗೊಂಡು ಸಂಶೋಧಿಸಿದ ವೈಜ್ಞಾನಿಕ ವಿಶ್ಲೇಷಣೆ ಅಥವಾ ಅವಲೋಕನದಿಂದ ಕೂಡಿದ ಯಾವುದಾದರೊಂದು ಯೋಜನೆ/ಮಾದರಿಯನ್ನು ಮಂಡಿಸಬೇಕು.

ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಫೆ. 6ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಆಯೋಜಿಸಿದ್ದು, ಕಾರವಾರದ ಕೊಡಿಬಾಗದಲ್ಲಿರುವ ಕೈಗಾ ನಿಲಯದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಸ್ಪರ್ಧೆ ನಡೆಯಲಿದೆ. ಇಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದ ಯುವ ವಿಜ್ಞಾನಿಗಳಿಗೆ ಕ್ರಮವಾಗಿ 5 ಸಾವಿರ ಹಾಗೂ 3 ಸಾವಿರ ನಗದು ಬಹುಮಾನ ಹಾಗೂ ಯುವ ವಿಜ್ಞಾನಿ ಪ್ರಶಸ್ತಿ ನೀಡಲಾಗುತ್ತಿದ್ದು, ಫೆಬ್ರವರಿ ಕೊನೆಯ ವಾರ ನಡೆಯುವ 2 ದಿನಗಳ ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹರಾಗಲಿದ್ದಾರೆ. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದ 4 ಯುವ ವಿಜ್ಞಾನಿಗಳಿಗೆ ಎರಡು ಹಂತದಲ್ಲಿ ತಲಾ 10,000 ನಗದು ಬಹುಮಾನ , ಸ್ಮರಣಿಕೆ ಹಾಗೂ ಯುವ ವಿಜ್ಞಾನಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಅಂದು ದೇಶದ ಖ್ಯಾತ ವಿಜ್ಞಾನಿಗಳು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಯುವ ವಿಜ್ಞಾನಿ ಪ್ರಶಸ್ತಿ ಸ್ಪರ್ಧೆಯ ರಾಜ್ಯ ಸಂಯೋಜಕ ಸೂರ್ಯಪ್ರಕಾಶ ಘನಾತೆ-9902997044 ಅಥವಾ ಜಿಲ್ಲಾ ಸಂಯೋಜಕ ಸುಧೀರ ನಾಯಕ-9448530620 ಅವರಿಗೆ ಸಂಪರ್ಕಿಸಬಹುದು ಎಂದು ಕರಾವಿಪ ಗೌರವ ಕಾರ್ಯದರ್ಶಿ ಸಿ. ಕೃಷ್ಟೇಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...