ಭಟ್ಕಳ ಚೌಥನಿಯಲ್ಲಿ ಯುವಕ ಆತ್ಮಹತ್ಯೆ

Source: S O News Service | By I.G. Bhatkali | Published on 11th November 2019, 3:04 PM | Coastal News | Don't Miss |

ಭಟ್ಕಳ: ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಪುರಸಭಾ ವ್ಯಾಪ್ತಿಯ ಚೌಥನಿಯಲ್ಲಿ ರವಿವಾರ ನಡೆದಿದೆ.

ಮೃತರನ್ನು ತಾಲೂಕಿನ ಚೌಥನಿಯ ನಿವಾಸಿ ರಾಜು ಮಾದೇವ ನಾಯ್ಕ (30) ಎಂದು ಗುರುತಿಸಲಾಗಿದೆ. ಮೃತರು ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಭಟ್ಕಳ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Read These Next

ಭಟ್ಕಳದಲ್ಲಿ ಭಾವೈಕ್ಯತೆ ಮತ್ತು ಧರ್ಮ ಸಮನ್ವಯತೆ ಸಾರುವ ಚೆನ್ನಪಟ್ಟಣ ಶ್ರೀಹನುಮಂತ ದೇವರ ರಥೋತ್ಸವ ಸಂಪನ್ನ

ಭಟ್ಕಳ: ತಾಲೂಕಿನ ಐತಿಹಾಸಿಕ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಭಾವೈಕ್ಯದ ಬ್ರಹ್ಮರಥೋತ್ಸವ ಬುಧವಾರ ಸಂಜೆ ಅತ್ಯಂತ ಸಡಗರ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...