ಯುವನಿಧಿ ನೋಂದಣಿ : ಉತ್ತಮ ಪ್ರತಿಕ್ರಿಯೆ

Source: SO News | By Laxmi Tanaya | Published on 8th January 2024, 10:12 PM | Coastal News | Don't Miss |

ಮಂಗಳೂರು : ಪದವೀಧರರಿಗೆ ಮತ್ತು ಡಿಪ್ಲೋಮೋ ಹೊಂದಿರುವವರಿಗೆ ನಿರುದ್ಯೋಗ ಭತ್ಯೆ ನೀಡುವ “ಯುವನಿಧಿ” ಯೋಜನೆ ನೋಂದಾವಣಿಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ.
 ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಈ ಸಂಬಂಧ ಮಾತನಾಡಿ ಪ್ರಗತಿ ಪರಿಶೀಲನೆ ನಡೆಸಿ, ಜಿಲ್ಲೆಯಲ್ಲಿ ಈ ಯೋಜನೆಗಳ ಅರ್ಹರಾದರಾದ ಸುಮಾರು 4500 ಮಂದಿ ನಿರುದ್ಯೋಗಿಗಳಿದ್ದಾರೆ, ಈಗಾಗಲೇ 916 ನೋಂದಣಿ ಆಗಿದ್ದು ಉಳಿದವರು ನೋಂದಣಿಯನ್ನು ಉಳಿದೆರಡು ದಿನಗಳಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

 ಶಿಕ್ಷಣ ಸಂಸ್ಥೆಗಳ ಹಳೆ ವಿದ್ಯಾರ್ಥಿಗಳ ಮಾಹಿತಿ, ಆಯಾ ಕಾಲೇಜು ಮತ್ತು ಡಿಪ್ಲೋಮೋ ಸಂಸ್ಥೆಗಳಲ್ಲಿ ಇದೆ. ಈ ನಿಟ್ಟಿನಲ್ಲಿ ಅಲ್ಲಿನ ಹಳೆ ವಿದ್ಯಾರ್ಥಿಗಳ ನೋಂದಣಿ ಜವಾಬ್ದಾರಿ ಆಯಾ ಕಾಲೇಜು, ಪ್ರಾಂಶುಪಾಲರದ್ದಾಗಿದೆ. ಈ ಬಗ್ಗೆ ತುರ್ತಾಗಿ ಗಮನಹರಿಸಲು ಅವರು ಸೂಚಿಸಿದರು.

 ಕೆಲವು ವಿದ್ಯಾರ್ಥಿಗಳ ಅಂಕಪಟ್ಟಿ ವಿವರ ನಾಡ್ ವ್ಯವಸ್ಥೆಯಲ್ಲಿ ಕಂಡುಬಾರದಿರುವ ತಾಂತ್ರಿಕ ದೋಷಗಳನ್ನು ಸರಿಪಡಿಸಲು ಮಂಗಳೂರು ವಿಶ್ವವಿದ್ಯಾನಿಲಯದ ಸಿಸ್ಟಮ್‍ಅನಾಲಿಸ್ಟ್ ಮನೋಹರ್ ಅವರನ್ನು ಸಂಪರ್ಕಿಸುವಂತೆ ಸಭೆಯಲ್ಲಿ ತಿಳಿಸಲಾಯಿತು.

 ಸಭೆಯಲ್ಲಿ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಪ್ರದೀಪ್ ಡಿ’ಸೋಜಾ, ಮಂಗಳೂರು ವಿಶ್ವವಿದ್ಯಾಲಯ ಕೌಶಲಾಭಿವೃದ್ಧಿ ಪ್ರೋ. ಎ.ಎಂ. ಖಾನ್. ಮತ್ತಿತರರು ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...