ಕಾರವಾರ:.ಯುವನಿಧಿ ಯೋಜನೆಗೆ ನೊಂದಾಯಿಸಿ: ಪ್ರತೀ ತಿಂಗಳು ಭತ್ಯೆ ಪಡೆಯರಿ

Source: S O News | By I.G. Bhatkali | Published on 5th January 2024, 11:35 PM | Coastal News | Special Report |

ಕಾರವಾರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ , ರಾಜ್ಯದ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯ ನೊಂದಣಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಜನವರಿ 12 ರಂದು ಯೋಜನೆಗೆ ಚಾಲನೆ ನೀಡಲಿದ್ದು, ನೊಂದಣಿಯಾಗಿರುವ ಎಲ್ಲಾ ಅಭ್ಯರ್ಥಿಗಳ ಖಾತೆಗೆ ಅಂದು ಹಣ ಜಮೆ ಆಗಲಿದೆ. ಈ ಯೋಜನೆಯ ಕುರಿತು ಸಂಪೂರ್ಣ ವಿವರವಾದ ಮಾಹಿತಿ ಇಲ್ಲಿದೆ.

ಈ ಯೋಜನೆಯು ಕರ್ನಾಟಕ ರಾಜ್ಯ ಸರ್ಕಾರವು ಪದವಿ ಹಾಗೂ ಡಿಪೆÇ್ಲೀಮಾ ಕೋರ್ಸ್ ಗಳನ್ನು 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾದ ಕರ್ನಾಟಕ ರಹವಾಸಿಗಳಿಗೆ ನಿರುದ್ಯೋಗ ಭತ್ಯೆಯನ್ನು ನೀಡುವ ಖಾತರಿ ಯೋಜನೆಯಾಗಿರುತ್ತದೆ. ಪದವೀದಧರರಿಗೆ ರೂ. 3000/- ಮತ್ತು ಡಿಪೆÇ್ಲೀಮಾ ತೇರ್ಗಡೆಯಾದವರಿಗೆ ರೂ.1500/- ನಿರುದ್ಯೋಗ ಭತ್ಯೆಯನ್ನು 2 ವಷರ್Àದವರೆಗೆ ನೀಡಲಾಗುವುದು. ಯುವನಿಧಿ ಯೋಜನೆಗೆ ಅಭ್ಯರ್ಥಿಗಳು ಸೇವಾ ಸಿಂಧು ಜಾಲತಾಣ https://sevasindhugs.karnataka.gov.in/ ನಲ್ಲಿ ಅರ್ಜಿ ಸಲ್ಲಿಸಬೇಕು.

ಯುವನಿಧಿ ಯೋಜನೆಯ ಫಲಾನುಭವಿಗಳಾಗಲು ಪದವಿ/ಡಿಪೆÇ್ಲೀಮಾ ಗಳನ್ನು 2022-23ನೇ ಸಾಲಿನಲ್ಲಿ ವ್ಯಾಸಂಗ ಮಾಡಿರಬೇಕು ಹಾಗೂ 2023ರಲ್ಲಿ ತೇರ್ಗಡೆಯಾಗಿದ್ದು 180 ದಿವಸಗಳವರೆಗೆ ನಿರುದ್ಯೋಗಿಗಳಾಗಿ ಅಭ್ಯರ್ಥಿಗಳು ಕನಿಷ್ಠ್ಠ 6 ವಷರ್À ಕರ್ನಾಟಕ ರಹವಾಸಿಗಳಾಗಿರಬೇಕು. ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗದಲ್ಲಿರುವವರು ಸ್ವ-ಉದ್ಯೋಗಿಗಳು, ಕನಿಷ್ಠÀ್ಠ 6 ವಷರ್À ಕರ್ನಾಟಕ ರಹವಾಸಿಗಳಲ್ಲದವರು ಮತ್ತು ಪದವಿ/ಡಿಪೆÇ್ಲೀಮಾ ಕೋರ್ಸ್‍ನ್ನು ಕರ್ನಾಟಕ ಹೊರತಾಗಿ ಬೇರೆ ರಾಜ್ಯದಲ್ಲಿ ವ್ಯಾಸಂಗ ಮಾಡಿದವರು, ಉನ್ನತ ಶಿಕ್ಷಣದಲ್ಲಿ ವ್ಯಾಸಂಗ ಮಾಡುತ್ತಿರುವವರು ಅನರ್ಹರಾಗಿರುತ್ತಾರೆ.

2023 ರಲ್ಲಿ ಪದವಿ / ಡಿಪೆÇ್ಲೀಮಾ ತೇರ್ಗಡೆಯಾದ ನಂತರ ಕನಿಷ್ಠÀ್ಠ 6 ತಿಂಗಳವರೆಗೆ ಉದ್ಯೋಗವನ್ನು ಪಡೆಯದ ಮತ್ತು ಕರ್ನಾಟಕದಲ್ಲಿ ವಾಸವಿದ್ದು, ವಿದ್ಯಾರ್ಥಿಯಾಗಿರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯಿಸುತ್ತದೆ. ವಾಸವಿರುವ ವಿದ್ಯಾರ್ಥಿ ಎಂದರೆ ಕರ್ನಾಟಕದಲ್ಲಿ ಕನಿಷ್ಠÀ್ಠ 6 ವಷರ್Àಗಳವರೆಗೆ ಪದವಿ / ಡಿಪೆÇ್ಲಮಾದವರೆಗೆ ಅಧ್ಯಯನ ಮಾಡಿದವರು. 6 ವಷರ್Àಗಳ ವಾಸವಿರುವುದನ್ನು ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರ/ಅಂಕಪಟ್ಟಿಗಳು ಅಥವಾ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ ಮತ್ತು ಡಿಪೆÇ್ಲೀಮಾ ಪ್ರಮಾಣ ಪತ್ರ ಅಥವಾ ಅಂಕಪಟ್ಟಿ ಅಥವಾ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ನೋಂದಣಿ ಸಂಖ್ಯೆ ಮತ್ತು ಪದವಿ ಪ್ರಮಾಣಪತ್ರ ಅಥವಾ ಪಡಿತರ ಚೀಟಿ ನೀಡಿದ ದಿನಾಂಕ ಮತ್ತು ಪದವಿ ಪ್ರಮಾಣ ಪತ್ರ NIOS (ನ್ಯಾಷÀನಲ್ ಇನ್‍ಸ್ಟಿಟ್ಯೂಟ್ ಆಫ್ ಓಪನ್‍ಸ್ಕೂಲಿಂಗ್) ನೀಡಿದ S.S.L.C. ಅಂಕಪಟ್ಟಿಯನ್ನು ಸಹವಾಸಸ್ಥಳ ಪರಿಶೀಲನೆಗಾಗಿ ಪರಿಗಣಿಸುವುದು.

ಅಭ್ಯರ್ಥಿಯ ಪದವಿ/ಡಿಪೆÇ್ಲೀಮಾ ಹೊಂದಿರುವ ಸ್ಥಿತಿಯ ಬಗ್ಗೆ ಪರಿಶೀಲಿಸಲು National Academic Depository (NAD) ಯಲ್ಲಿ ಅಪ್‍ಲೋಡ್ ಮಾಡಲಾದ ಅಭ್ಯರ್ಥಿಗಳ ಪದವಿ/ಡಿಪೆÇ್ಲೀಮೊ ಪ್ರಮಾಣ ಪತ್ರ ಅಥವಾ ತಾತ್ಕಾಲಿಕ ಪದವಿ/ಡಿಪೆÇ್ಲೀಮೊ ಪ್ರಮಾಣ ಪತ್ರಗಳನ್ನು ಪರಿಗಣಿಸಲಾಗುವುದು. ಫಲಿತಾಂಶಗಳ ಪ್ರಕಟಣೆಯ ದಿನಾಂಕದಿಂದ ಒಂದು ವಾರದೊಳಗೆ ವಿದ್ಯಾರ್ಥಿಗಳ ಪದವಿ/ಡಿಪೆÇ್ಲೀಮೊ ಪ್ರಮಾಣ ಪತ್ರಗಳು ಅಥವಾ ತಾತ್ಕಾಲಿಕ ಪದವಿ/ಡಿಪೆÇ್ಲೀಮೊ ಪ್ರಮಾಣ ಪತ್ರಗಳು NAD ನಲ್ಲಿ ಅಪ್‍ಲೋಡ್ ಮಾಡಲಾಗಿರುವುದನ್ನು ವಿಶ್ವವಿದ್ಯಾಲಯಗಳು ಮತ್ತು ಮಂಡಳಿಗಳು ಖಚಿಪಡಿಸಿಕೊಳ್ಳಬೇಕು. ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳುವ ಮೊದಲು ಡಿಜಿಲಾಕರ್‍ನಲ್ಲಿ ಡಿಜಿಲಾಕರ್ ಖಾತೆಯನ್ನು ಸೃಜಿಸುವ ಮೂಲಕ ತಮ್ಮ NAD ಪ್ರಮಾಣ ಪತ್ರವನ್ನು ಪಡೆದಿರುವುದನ್ನು ಖಚಿತಪಡಿಸಿಕೊಳ್ಳಬೇಕು. NAD ಕರ್ನಾಟಕ ಪೆÇೀರ್ಟಲ್‍ನಲ್ಲಿ ಚಾಟ್‍ಬಾಟ್ ಉಪಯುಕ್ತತೆಯನ್ನು ಬಳಸಿಕೊಂಡು ಅಭ್ಯರ್ಥಿಗಳು ತಮ್ಮ ಡಿಜಿಲಾಕರ್‍ನಲ್ಲಿ ಪದವಿ/ ಡಿಪೆÇ್ಲೀಮೊ ಪ್ರಮಾಣ ಪತ್ರಗಳ ಲಭ್ಯತೆಯನ್ನು ಪರಿಶೀಲನೆ ಮಾಡತಕ್ಕದ್ದು. ಅಭ್ಯರ್ಥಿಗಳು ನೇರ ನಗದು ವರ್ಗಾವಣೆಗಳನ್ನು (ಡಿಬಿಟಿ) ಸ್ವೀಕರಿಸಲು ಆಧಾರ್ ಸಂಖ್ಯೆ ಸೇರ್ಪಡೆಯಾದ ಬ್ಯಾಂಕ್ ಖಾತೆಯನ್ನು ಹೊಂದಿಬೇಕು ಹಾಗೂ ತಮ್ಮ ಆಧಾರ್ ಸಂಖ್ಯೆಯನ್ನು ತಮ್ಮ ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವುದನ್ನು ಖಚಿತಪಡಿಸಕೊಳ್ಳಬೇಕಿದೆ.

ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿರುವ ವಿದ್ಯಾರ್ಥಿಗಳು ಮುಂಚಿತವಾಗಿ ಅಂದರೆ ತಾತ್ಕಾಲಿಕ ಪದವಿ ಪತ್ರ ಪಡೆದು 180 ದಿನಗಳು ಪೂರ್ಣಗೊಳ್ಳುವ ಮುಂಚೆ ಅರ್ಜಿ ಸಲ್ಲಿಸತಕ್ಕದ್ದು. ಆದರೆ 180 ದಿನಗಳ ನಂತರ ಸೌಲಭ್ಯವನ್ನು ನೀಡಲಾಗುವುದು. ಅಭ್ಯರ್ಥಿಯು ಅವಳು/ಅವನು ನಿರುದ್ಯೋಗಿ ಎಂದು ದೃಢೀಕರಿಸಬೇಕು ಮತ್ತು ಘೋಷÀಣೆಯನ್ನು ಸಲ್ಲಿಸಬೇಕು. ಉದ್ಯೋಗ ದೊರಕಿದ ನಂತರ ಅಭ್ಯರ್ಥಿಯು ತಕ್ಷಣವೇ ಮುಚ್ಚಳಿಕೆ ವತ್ರ ನೀಡತಕ್ಕದ್ದು. ನೋಂದಾಯಿತ ವಿವರಗಳನ್ನು NAD ಮೂಲಕ ಪರಿಶೀಲಿಸಲಾಗುವುದು. ಪದವಿ/ಡಿಪೆÇ್ಲಮಾದ ಪ್ರಮಾಣಪತ್ರಗಳನ್ನು manual ಅಪ್‍ಲೋಡ್ ಮಾಡಿದರೆ, ಅಪ್ ಲೋಡ್ ಮಾಡಿದ ದಾಖಲೆಗಳ ವಿವರಗಳನ್ನು ಆಯಾ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ (ಮೌಲ್ಯಮಾಪನ) ಅವರಿಗೆ ರವಾನಿಸಲಾಗುವುದು, ಅವರಿಗೆ ಲಾಗಿನ್ credentials ಅನ್ನು ಒದಗಿಸಲಾಗುವುದು. ರಿಜಿಸ್ಟ್ರಾರ್ (ಮೌಲ್ಯಮಾಪನ) ರವರು ದಾಖಲೆಗಳ ದೃಢೀಕರಣವನ್ನು ಪರಿಶೀಲಿಸಿ, 5 ಕೆಲಸದ ದಿನಗಳ ನಿಗದಿತ ಅವಧಿಯೊಳಗೆ NAD ಪೆÇೀರ್ಟಲ್‍ನಲ್ಲಿ ಅದನ್ನು ಅಪ್‍ಲೋಡ್ ಮಾಡಬೇಕು. ತಪ್ಪು ಘೋಷÀಣೆ ಅಥವಾ ಉದ್ಯೋಗ ಪಡೆದಿರುವುದನ್ನು ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುತ್ತದೆ. ಪಾವತಿಸಿದ ಮೊತ್ತವನ್ನು ಕಾನೂನಿನ ಪ್ರಕಾರ ವಸೂಲಿ ಮಾಡಲಾಗುವುದು. ಅಭ್ಯರ್ಥಿಯು ನಿರುದ್ಯೋಗಿ ಎಂದು ಪ್ರತಿ ತಿಂಗಳು ಕಡ್ಡಾಯವಾಗಿ ದೃಢೀಕರಿಸಬೇಕು. ಸೇವಾ ಸಿಂಧು ಪೆÇೀರ್ಟಲ್‍ನಲ್ಲಿ ಉದ್ಯೋಗಿ ಅಥವಾ ನಿರುದ್ಯೋಗಿಯಾಗಿರುವುದನ್ನು ನಿಗದಿತ ನಮೂನೆಯಲ್ಲಿ ಪ್ರತಿ ತಿಂಗಳ 25 ನೇ ತಾರೀಖು ಅಥವಾ ಅದಕ್ಕಿಂತ ಮೊದಲು ಆಧಾರ್ ಆಧಾರಿತ OTP ಮೂಲಕ ಘೋಷÀಣೆ ಮಾಡತಕ್ಕದ್ದು. ಸ್ವೀಕೃತವಾದ ಘೋಷÀಣೆಯ ಆಧಾರದ ಮೇಲೆ, ಮುಂದಿನ ತಿಂಗಳ ಭತ್ಯೆಯನ್ನು ಪಾವತಿಯನ್ನು ಮಾಡಲಾಗುವುದು. ಪ್ರತಿ ತಿಂಗಳು ಘೋಷಣೆ ಮಾಡದಿದ್ದಲ್ಲಿ 90 ದಿನಗಳ ನಂತರ ನಿಷ್ಕ್ರಿಯಗೊಳಿಸಲಾಗುವುದು.

ಅಭ್ಯರ್ಥಿಗಳು ತಾನು ಕರ್ನಾಟಕ ರಹವಾಸಿಯೆಂದು. ಸರ್ಕಾರಿ ಉದ್ಯೋಗದಲ್ಲಿಲ್ಲವೆಂದು, ಸ್ವ-ಉದ್ಯೋಗಿಯಲ್ಲವೆಂದು ಮತ್ತು ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿಲ್ಲವೆಂದು ಅರ್ಜಿಯ ಪ್ರಾರಂಭದಲ್ಲಿಯೇ ಘೋಷÀಣೆ ಮಾಡಬೇಕಾಗುತ್ತದೆ. ಉದ್ಯೋಗ ದೊರಕಿದ ತಕ್ಷಣ ಪ್ರತಿ ತಿಂಗಳು 25ನೇ ತಾರೀಖಿನೊಳಗೆ ಘೋಷÀಣೆ ಮಾಡುವ ಸಂದರ್ಭದಲ್ಲಿ ಉದ್ಯೋಗಿಯೆಂದು ಘೋಷಿಸಬೇಕು. ನೋಂದಾಯಿತ ಅಭ್ಯರ್ಥಿಗಳ ದತ್ತಾಂಶವು ಸ್ಕಿಲ್ ಕನೆಕ್ಟ್ ಪೆÇೀರ್ಟಲ್‍ಗೆ ಜೋಡಣೆಯಾಗಲಿದ್ದು, ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ದೀರ್ಘಾವಧಿ/ಅಲ್ಪವಾಧಿ ತರಬೇತಿಗಳನ್ನು ನೀಡಲು ಮತ್ತು ಈಗಾಗಲೇ ನೋಂದಾಯಿಸಿಕೊಂಡ ಉದ್ಯೋಗದಾತರು ಅಭ್ಯರ್ಥಿಗಳ ದತ್ತಾಂಶವನ್ನು ಬಳಸಿಕೊಂಡು ಅವರಿಗೆ ಉದ್ಯೋಗ ದೊರೆಯುವ ಸೌಲಭ್ಯ ಕೂಡಾ ದೊರೆಯಲಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ಮತದಾರರ ಪಟ್ಟಿಯ ಪರಿಷ್ಕರಣೆ ಸಮಯದಲ್ಲಿ ಯುವ ಮತದಾರರ ಸಂಖ್ಯೆಯು ಮತದಾನ ಪಟ್ಟಿ ಪ್ರಕಾರ ಅತ್ಯಧಿಕವಾಗಿದೆ. ಅದರಂತೆ 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ಪದವಿ / ಡಿಪೆÇ್ಲೀಮಾ ತೇರ್ಗಡೆಯಾದ ಎಲ್ಲಾ ಅರ್ಹ ಯುವಕರಿಗೆ, ಯುವನಿಧಿ ಯೋಜನೆಯ ಪ್ರಯೋಜನವನ್ನು ದೊರಕಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳು, ತಾಲೂಕು ಕಚೇರಿಗಳು, ತಾಲೂಕು ಪಂಚಾಯತ್‍ಗಳು ಹಾಗೂ ಗ್ರಾಮ ಪಂಚಾಯತ್ ಗಳ ಮೂಲಕ ಪ್ರತಿಯೊಬ್ಬ ಫಲಾನುಭವಿಯ ಮಾಹಿತಿ ಸಂಗ್ರಹಿಸಿ, ಅವರಿಗೆ ಯೋಜನೆಯ ಮಾಹಿತಿ ನೀಡಿ, ನೊಂದಣಿ ಮಾಡುವ ಕಾರ್ಯವನ್ನು ಅಭಿಯಾನದ ಮಾದರಿಯಲ್ಲಿ ಕೈಗೊಳ್ಳುವಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ. ಜಿಲ್ಲೆಯಲ್ಲಿನ ಪ್ರತೀ ದಿನದ ನೊಂದಣಿಯ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ಯಾವುದೇ ಅರ್ಹ ಫಲಾನುಭವಿ ಯೋಜನೆಯಿಂದ ವಂಚಿತರಾಗದಂತೆ ಸೋಷಿಯಲ್ ಮೀಡಿಯಾ ಸೇರಿದಂತೆ ಎಲ್ಲಾ ವಿಧದ ಪ್ರಚಾರ ಮಾಧ್ಯಮಗಳಲ್ಲಿ ಪ್ರಚಾರ ಮತ್ತು ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ: ಗಂಗೂಬಾಯಿ ಮಾನಕರ, ಜಿಲ್ಲಾಧಿಕಾರಿಗಳು, ಉತ್ತರ ಕನ್ನಡ ಜಿಲ್ಲೆ.

Read These Next

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...