ಅ.31ರೊಳಗೆ ಕಾಮಗಾರಿಗೆ ಅನುಮೋದನೆ ಪಡೆಯಲು ಜಿ.ಪಂ. ಅಧ್ಯಕ್ಷರ ಸೂಚನೆ

Source: sonews | By Staff Correspondent | Published on 11th October 2019, 5:59 PM | Coastal News | Don't Miss |

ಕಾರವಾರ: ಅಕ್ಟೋಬರ್ 31ರೊಳಗೆ ವಿವಿಧ ಕಾಮಗಾರಿಗಳ ಅಂದಾಜು ಪಟ್ಟಿಯನ್ನು ಸಿದ್ಧಪಡಿಸಿ ಅನುಮೋದನೆ ಪಡೆಯುವಂತೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ ಸೂಚಿಸಿದ್ದಾರೆ.
    
ಶುಕ್ರವಾರ ನಡೆದ ಜಿಲ್ಲಾ ಪಂಚಾಯ್ತಿ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು, ಈಗಾಗಲೇ ಬಹುತೇಕ ಎಲ್ಲ ಇಲಾಖೆಗಳ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು ಅಕ್ಟೋಬರ್ 31ರೊಳಗೆ ಪಂಚಾಯತ್ ರಾಜ್ ಇಲಾಖೆ ಕಾಮಗಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳಿಗೆ ಅಂದಾಜು ಪಟ್ಟಿ ಸಲ್ಲಿಸಿ ಅನುಮೋದನೆ ಪಡೆಯುವಂತೆ ಸೂಚಿಸಿದರು.

ಅಂದಾಜು ಪಟ್ಟಿ ಮಾಡುವುದೇ ವಿಳಂಬವಾದರೆ ಪ್ರಸಕ್ತ ಸಾಲಿನ ಕಾಮಗಾರಿಗಳು ಮುಗಿಯುವುದು ಈ ಆರ್ಥಿಕ ವರ್ಷದಲ್ಲಿ ಮುಗಿಯುವುದು ಕಷ್ಟವಾಗಲಿದೆ. ಅಲ್ಲದೆ ರಸ್ತೆ, ಕುಡಿಯುವ ನೀರಿನ ಕಾಮಗಾರಿಗಳ ಅತಿ ಜರೂರು ಆಗಬೇಕಿರುವುದರಿಂದ ಕಾಮಗಾರಿಗಳನ್ನು ಶೀಘ್ರವೇ ಆರಂಭಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಅನುಮೋದನೆ ಪಡೆದ ವಿವಿಧ ಇಲಾಖೆಗಳ ಕ್ರಿಯಾ ಯೋಜನೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಂ.ರೋಷನ್ ಅವರು, ಎಲ್ಲ ಅನುಮೋದಿತ ಕ್ರಿಯಾ ಯೋಜನೆಗಳನ್ನು ಅಂದಾಜು ಪಟ್ಟಿ ತಯಾರಿಕೆಗೆ ಸಂಬಂಧಿತ ಎಂಜಿನಿಯರಿಂಗ್ ವಿಭಾಗಕ್ಕೆ ಸಲ್ಲಿಸಬೇಕು. ಎಂಜಿನಿರಿಂಗ್ ವಿಭಾಗವೂ ಶೀಘ್ರ ಅಂದಾಜು ಪಟ್ಟಿ ತಯಾರಿಸಿ ಅನುಮೋದನೆ ಪಡೆಬೇಕು ಎಂದರು.

ಎಲ್ಲ ಇಲಾಖೆಗಳ ಅನುದಾನದಲ್ಲಿ ನಿರ್ದಿಷ್ಟ ಶೇಕಡಾವಾರು ಅನುದಾನವನ್ನು ವಿಕಲಚೇತನ ಕಲ್ಯಾಣಕ್ಕೆ ಮೀಸಲಿಡಬೇಕೆಂಬ ನಿಯಮವಿದ್ದು ಪ್ರಸ್ತುತ ಕೇವಲ ತ್ರಿಚಕ್ರ ವಾಹನ ಮಾತ್ರ ವಿತರಿಸಲಾಗುತ್ತಿದೆ. ಸಮುದಾಯ ಕಾಮಗಾರಿಗಳನ್ನು ತೆಗೆದುಕೊಳ್ಳುವ ಅವಕಾಶವಿದ್ದಲ್ಲಿ ಈ ಸಂಬಂಧ ಕ್ರಿಯೋ ಯೋಜನೆಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಅಂಗ ವಿಕಲರ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚಿಸಲಾಯಿತು.

ಅಲ್ಲದೆ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ನಿಯಮಾವಳಿಯಂತೆ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಪ್ರತಿ ಇಲಾಖೆಯ ಶೇ.15ರಷ್ಟು ಅನುದಾನ ವಿನಿಯೋಗಿಸುವ ಸಂಬಂಧ ನಿಯಮಾನುಸಾರ ಕ್ರಮಕ್ಕೆ ಸಭೆಯಲ್ಲಿ ಸೂಚಿಸಲಾಯಿತು.

ವಿಕಲ ಚೇತನರ ಪ್ರಮಾಣ ಪತ್ರ ನೀಡುವ ಕಾರ್ಯಕ್ರಮ ಜಿಲ್ಲಾ ಸರ್ಜನ್ ನೇತೃತ್ವದ ಸಮಿತಿಯಿಂದಲೇ ನೀಡಲಾಗುತ್ತಿದೆ. ಅದು ವಾರದಲ್ಲಿ ಪ್ರತಿ ಗುರುವಾರ ನಡೆಯುವುದರಿಂದ ಜಿಲ್ಲಾಸ್ಪತ್ರೆಯಲ್ಲಿ ಜನಜಂಗುಳಿ ಆಗಲಿದೆ ಮತ್ತು ವಿಕಲಚೇತನರು ದೂರದ ಊರುಗಳಿಂದ ಬರಬೇಕಿರುವುದರಿಂದ ಪರ್ಯಾಯ ಕ್ರಮಗಳ ಬಗ್ಗೆ ಸಂಬಂಧಿಸಿದ ಇಲಾಖೆ ಮುಖ್ಯಸ್ಥರ ಸಲಹೆ ಪಡೆಯಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಕೃಷಿ, ತೋಟಗಾರಿಕೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಕ್ರೀಡಾ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಸಂತೋಷ ರೇಣಕೆ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ನಾಯ್ಕ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸಂಜಯ ಮಾರುತಿ ಹಣಬರ ಉಪಸ್ಥಿತರಿದ್ದರು.
    


 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...