ಜೊಯಿಡಾ:ಮೇಲ್ದರ್ಜೆಗೇರಿಸಿದ ತಾಲ್ಲೂಕು ಆಸ್ಪತ್ರೆ ಉದ್ಘಾಟಿಸಿದ ಸಚಿವ ದೇಶಪಾಂಡೆ

Source: S.O. News Service | By MV Bhatkal | Published on 7th July 2019, 6:45 PM | Coastal News | Don't Miss |

ಜೊಯಿಡಾ: ‘ವೈದ್ಯರ ಕೊರತೆ ರಾಜ್ಯದಾದ್ಯಂತ ಇದೆ. ಅದನ್ನು ಆದಷ್ಟು ಬೇಗ ನೀಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಜಿಲ್ಲೆಯ ಎಲ್ಲ ಆಸ್ಪತ್ರೆಗಳನ್ನು ಸೂಕ್ತ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ಇಲ್ಲಿ 30ರಿಂದ 100 ಹಾಸಿಗೆಗಳಿಗೆ ₹ 6 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಿದ ತಾಲ್ಲೂಕು ಆಸ್ಪತ್ರೆ ಕಟ್ಟಡವನ್ನು ಹಾಗೂ ₹ 1.50 ಕೋಟಿ ಅನುದಾನದಲ್ಲಿ ನವೀಕರಿಸಲಾದ ಬಸ್ ನಿಲ್ದಾಣವನ್ನು ಶನಿವಾರ ಉದ್ಘಾಟಿಸಿದರು. ಇದೇವೇಳೆ ಕೃಷಿ ಅಭಿಯಾನ ರಥಕ್ಕೂ ಚಾಲನೆ ನೀಡಿದರು.
ತಾಲ್ಲೂಕಿನಲ್ಲಿ ಶಿಕ್ಷಣ ಮತ್ತು ಆರೋಗ್ಯ ಸೇವೆಗಳು ಎಲ್ಲರಿಗೂ ಸುಲಭ
ವಾಗಿ ಸಿಗುವಂತೆ ಆಗಬೇಕು. ಈ ಆಸ್ಪತ್ರೆಗೆ ಅಗತ್ಯವಿರುವ ವೈದ್ಯರನ್ನು ನಿಯೋಜಿಸಲು ಕ್ರಮ ವಹಿಸಲಾಗು
ವುದು’ ಎಂದು ಭರವಸೆ ನೀಡಿದರು.
‘ವಿವಿಧ ಕಾಮಗಾರಿಗಳು ಯಾವ ರೀತಿ ಆಗುತ್ತಿವೆ ಎಂಬುದನ್ನು ಸ್ಥಳಿಯರೇ ನೋಡಿ, ಕಳಪೆ ಎಂದು ಕಂಡುಬಂದರೆ ಕಾಮಗಾರಿ ನಿಲ್ಲಿಸಿ. ಕೆಲವು ಕಟ್ಟಡಗಳು ಮತ್ತು ಕಾಮಗಾರಿ ಕಳಪೆಯಾಗಿರುವ ಬಗ್ಗೆ ನನಗೆ ಮಾಹಿತಿ ದೊರೆತಿದೆ. ಜನರು ಅಂತಹ ಗುತ್ತಿಗೆದಾರರ ಮಾಹಿತಿಯನ್ನು ಜನಪ್ರತಿನಿಧಿಗಳ ಗಮನಕ್ಕೆ ತರಬೇಕು’ ಎಂದರು.
ಜಿಲ್ಲಾ ಪಂಚಾಯ್ತಿ ಉಪಾದ್ಯಕ್ಷ ಸಂತೋಷ ರೇಣಕೆ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ರಮೇಶ ನಾಯ್ಕ, ಸಂಜಯ ಹಣಬರ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ನರ್ಮದಾ ಪಾಟ್ನೇಕರ, ಉಪ ವಿಭಾಗಾಧಿಕಾರಿ ಅಭಿಜಿನ್, ಉಪಾದ್ಯಕ್ಷ ವಿಜಯ ಪಂಡಿತ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶೈಲಾ ನಾಯ್ಕ, ತಾಲ್ಲೂಕು ಪಂಚಾಯ್ತಿ ಸದಸ್ಯೆ ಅಲ್ಕಂಜಾ ಮಂಥೇರೋ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಅಶೋಕ ಕುಮಾರ್, ತಹಶೀಲ್ದಾರ ಸಂಜಯ ಕಾಂಬಳೆ, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಪ್ರಕಾಶ ಹಾಲಮ್ಮನವರ, ತಾಲ್ಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ವಿಜಯಕುಮಾರ್, ಡಾ.ಸಂಗಪ್ಪ ಗಾಬಿ ಇದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...